
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆ ಎಸ್ ಎಸ್ ಸಿ ಎಲ್-ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಹಾಗೂ ಬೀಜ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ಹುದ್ದೆಗಳಿಗೆ ವಿದ್ಯಾರ್ಹತೆ ಬಿ ಎಸ್ ಸಿ ಜತೆಗೆ ಕೃಷಿ ಪದವಿ ಪಡೆದಿರಬೇಕು. ಹಿರಿಯ ಸಹಾಯಕ ಹುದ್ದೆಗಳಿಗೆ ಬಿಕಾಂ ಅಥವಾ ಬಿಬಿಎಂ ಪದವಿ ಹಾಗೂ ಟ್ಯಾಲಿ ಪ್ರಮಾಣ ಪತ್ರ ಹೊಂದಿರಬೇಕು. ಕಿರಿಯ ಸಹಾಯಕ ಹುದ್ದೆಗಳಿಗೆ ಬಿಕಾಂ ಅಥವಾ ಬಿಬಿಎಂ ಪದವಿ ಹೊಂದಿರಬೇಕು. ಜತೆಗೆ ಟ್ಯಾಲಿ ಪ್ರಮಾಣ ಪತ್ರ ಹೊಂದಿರಬೇಕು. ಇನ್ನು ಬೀಜ ಸಹಾಯಕರ ಹುದ್ದೆಗಳಿಗೆ ಕೃಷಿ ವಿಷಯದಲ್ಲಿ ಎರಡು ವರ್ಷದ ಡಿಪ್ಲೊಮಾ ಪದವಿ ಪಡೆದಿರಬೇಕು.
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತ ವೆಬ್ ಸೈಟ್ http://karnataka.gov.in/keaಗೆ ಭೇಟಿ ನೀಡಿ
ಕೃಷ್ಣಾ ನದಿತೀರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ; ಸಂಭವನೀಯ ಪ್ರವಾಹ ಪರಿಸ್ಥಿತಿ ಅವಲೋಕನ