Kannada NewsKarnataka NewsLatest

*BREAKING: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಅಪರಾಧಿಗೆ NIA ಕೋರ್ಟ್ ನಿಂದ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ*

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಮೊಹಮ್ಮದ್ ಶಾರಿಕ್ ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

2022ರ ನವೆಂಬರ್ 19ರಂದು ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್ ಐಎ ವಿಶೇಷ ನ್ಯಾಯಾಲಯ ಅಪರಾಧಿ ಮೊಹಮ್ಮದ್ ಶಾರಿಕ್ ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಕುಕ್ಕರ್ ಬಾಂಬ್ ಸ್ಫೋತ ಪ್ರಕರಣದ 16 ಆರೋಪಿಗಳಲ್ಲಿ ಶಾರಿಕ್ ಪ್ರಮುಖ ಅಪರಾಧಿಯಾಗಿದ್ದು, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಎನ್ ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಕಳೆದ ಡಿಸೆಂಬರ್ ನಲ್ಲಿ ಶಾರಿಕ್ ತನ್ನತಪ್ಪನ್ನು ಒಪ್ಪಿಕೊಂಡಿದ್ದ.

ಅಲ್ಲದೇ ನ್ಯಾಯಾಲಯದಲ್ಲಿ ತನಗೆ ಮದುವೆಯಾಗಿ ಮನೆಯಲ್ಲಿ ಚಿಕ್ಕ ಮಗಳಿದ್ದಾಳೆ. ಮಗಳ ಪೋಷಣೆಯ ಜವಾಬ್ದಾರಿ ನನ್ನ ಮೇಲಿರುವುದರಿಂದ ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಿದ್ದ. ಅಪರಾಧಿ ತಪ್ಪು ಒಪ್ಪಿಕೊಂಡಿದ್ದರಿಂದ ಹಾಗೂ ಮಾನವೀಯ ನೆಲೆಯಲ್ಲಿ ಕೋರ್ಟ್ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

Home add -Advt

ಈಗಾಗಲೇ ಅಪರಾಧಿ 4 ವರ್ಷಗಳಿಂದ ಜೈಲುವಾಸವನ್ನು ಅನುಭವಿಸುತ್ತಿರುವುಅರಿಂದ ಇದನ್ನು ಕೋರ್ಟ್ ಗಣನೆಗೆ ತೆಗೆದುಕೊಂಡಿದ್ದು, ಉಳಿದ 6 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.


Related Articles

Back to top button