Politics

*ಶಿವರಾಜ್ ಕುಮಾರ್ ಅಭಿಮಾನಿಗಳಿಂದ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಸೋಲನುಭವಿಸಿರುವ ಬೆನ್ನಲ್ಲೇ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ, ನಟ ಶಿವರಾಜ್ ಕುಮಾರ್ ವಿರುದ್ಧ ವ್ಯಂಗ್ಯವಾಡಿದ್ದರು. ಇದರ ಬೆನ್ನಲ್ಲೇ ರೊಚ್ಚಿಗೆದ್ದಿರುವ ಶಿವರಾಜ್ ಕುಮಾರ್ ಅಭಿಮಾನಿಗಳು ಕುಮಾರ್ ಬಂಗಾರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಸೋಲನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಬಗ್ಗೆ ಕುಮಾರ್ ಬಂಗರಪ್ಪ ಲಘುವಾಗಿ ಮಾತನಾಡಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣಗಳಲಿಯೂ ಪೋಸ್ಟ್ ಮಾಡಿದ್ದರು.

ಇದರಿಂದ ಕೋಪಗೊಂಡಿರುವ ಶಿವರಾಜ್ ಕುಮಾರ್ ಅಭಿಮಾನಿಗಳು, ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವರಾಜ್ ಕುಮಾರ್ ಬಗ್ಗೆ ಹಾಗೂ ರಾಜ್ ಕುಮಾರ್ ಕುಟುಂಬದಬಗ್ಗೆ ಮಾತನಡಿದ್ದಕ್ಕೆ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.

Home add -Advt

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button