ಜೆಡಿಎಸ್ ಬಿಜೆಪಿಯ 'ಬಿ ಟೀಂ' ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ 'ಬಿ ಟೀಂ' ಆಗಿದ್ದರೆ,ಕಾಂಗ್ರೆಸ್ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳಒಪ್ಪಂದವೇನೂ ಇಲ್ಲ.ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ.
2/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 20, 2020
“ಲೋಕದ ಡೊಂಕ ನೀವೇಕೆ ತಿದ್ದುವಿರಿ?
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ
ನೆರೆಮನೆಯ ದುಃಖಕ್ಕೆ ಅಳುವವರ
ಮೆಚ್ಚ ಕೂಡಲಸಂಗಮದೇವ”
4/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 20, 2020
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬಿಜೆಪಿ ಜೊತೆಗೆ ವಿಲೀನ ಮಾಡಿಕೊಳ್ಳುವ ಸುದ್ದಿಯನ್ನು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ.
ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ ಎಂದು ಅವರು ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ