Politics

*ಮತ್ತೆ ಆಸ್ಪತ್ರೆಗೆ ದಾಖಲಾದ ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ : ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದ ಹಿನ್ನೆಲೆಯಲ್ಲಿ ಜೆಡಿಎಸ್‌ ವರಿಷ್ಠ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಚ್‌ಡಿಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಫದ ಸಮಸ್ಯೆಯಿಂದ ಬಳಲುತ್ತಿರುವ ಎಚ್‌ಡಿಕೆ ಇತ್ತೀಚಿಗಷ್ಟೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಹಲವು ಜೆಡಿಎಸ್‌ ನಾಯಕರು ಹಾಗೂ ದೇವೇಗೌಡರ ಕುಟುಂಬಸ್ಥರು ಆಸ್ಪತ್ರೆಯಲ್ಲಿ ಹಾಜರಿದ್ದು ಎಚ್‌ಡಿಕೆ ಆರೋಗ್ಯದ ಬಗ್ಗೆ ಗಮನ ಹರಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button