Kannada NewsKarnataka NewsLatest

*ಕಾರು ಅಪಘಾತ: ಓರ್ವ ಸಜೀವದಹನ; ಮೂವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತಕ್ಕೆ ಕಾರೊಂದು ಹೊತ್ತಿ ಉರಿದಿದ್ದು, ಓರ್ವ ಸಜೀವದಹನವಾಗಿರುವ ಘಟನೆ ನಡೆದಿದೆ.

ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಓರ್ವ ಸಜೀವದಹನವಾಗಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಕೋರಗೆರೆ ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ಮೃತ ವ್ಯಕ್ತಿ ಗುಬ್ಬಿ ತಾಲೂಕಿನವರಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

Home add -Advt

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Related Articles

Back to top button