ರಾಜಭವನಕ್ಕೆ ತೆರಳಿ ರಾಜಿನಾಮೆ ಸಲ್ಲಿಸಿದ ಕುಮಾರಸ್ವಾಮಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು-
ವಿಧಾನಸಭೆಯಲ್ಲಿ ವಿಶ್ವಾಸಮತ ಕಳೆದುಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜಭವನಕ್ಕೆ ತೆರಳಿ ರಾಜಿನಾಮೆ ಸಲ್ಲಿಸಿದರು.
ವಿಧಾನಸೌಧದಿಂದ ನೇರವಾಗಿ ರಾಜಭವನಕ್ಕೆ ತೆರಳಿದರು. ಬದಲಿ ವ್ಯವಸ್ಥೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ರಾಜ್ಯಪಾಲರು ಕುಮಾರಸ್ವಾಮಿಗೆ ಸೂಚಿಸಿದರು.
ಇಂದು ರಾತ್ರಿ ಅಥವಾ ನಾಳೆ ಬಿಜೆಪಿ ಸರಕಾರ ರಚಿಸಲು ಅವಕಾಶ ಕೋರಿ ಹಕ್ಕು ಮಂಡಿಸುವ ಸಾಧ್ಯತೆ ಇದೆ. ರಾಜ್ಯಪಾಲರು ನಾಳೆಯೇ ಸರಕಾರ ರಚನೆಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರಕಾರ ರಚಿಸಲು ಆಹ್ವಾನ ನೀಡಬಹುದು.
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಗುರುವಾರ ಅಥವಾ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಯಡಿಯೂರಪ್ಪ ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ