Belagavi NewsBelgaum NewsKarnataka NewsNational

*ಕುಂಭಮೇಳ ದುರಂತ: ನಾಲ್ವರ ಮೃತದೇಹ ರಾಜ್ಯಕ್ಕೆ ತರಲು ಐಪಿಎಸ್ ಅಧಿಕಾರಿ ಹರಿರಾಮ್ ಶಂಕರ್‌ಗೆ ಜವಾಬ್ದಾರಿ*

ಪ್ರಗತಿವಾಹಿನಿ ಸುದ್ದಿ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತಪಟ್ಟಿದ್ದಾರೆ. ಈ ನಾಲ್ಕು ಜನರ ಮೃತದೇಹಗಳನ್ನು ರಾಜ್ಯಕ್ಕೆ ತರುವ ಕಾರ್ಯಾಚರಣೆಯ ನಿರ್ವಹಣಾ ಜವಾಬ್ದಾರಿಯನ್ನು ಐಪಿಎಸ್ ಅಧಿಕಾರಿ ಹರಿರಾಮ್ ಶಂಕರ್‌ಗೆ ನೀಡಲಾಗಿದೆ.

ಈ ಕುರಿತು ಸಚಿವ ಕೃಷ್ಣ ಬೈರೇಗೌಡ ತಮ್ಮ ‘ಎಕ್ಸ್’ ಖಾತೆ ಮೂಲಕ ಮಾಹಿತಿ ನೀಡಿದ್ದಾರೆ. ಎರಡು ಆ್ಯಂಬ್ಯುಲೆನ್ಸ್‌ಗಳ ಮೂಲಕ ಮೃತದೇಹಗಳನ್ನು ದೆಹಲಿಗೆ ತರಲಾಗುತ್ತಿದೆ. ಅಲ್ಲಿಂದ ಇಂಡಿಗೋ ವಿಮಾನದಲ್ಲಿ ಬೆಳಗಾವಿಗೆ ಮೃತದೇಹಗಳನ್ನು ತರಲಾಗುತ್ತದೆ. ಇದಕ್ಕಾಗಿ ವಿಶೇಷ ಜಿಲ್ಲಾಧಿಕಾರಿ ಹರ್ಷ ಅವರು ಬೆಳಗಾವಿಯಿಂದ ದೆಹಲಿಗೆ ತೆರಳಿದ್ದಾರೆ. ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ರಾಜ್ಯದ ಭೂತರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಇಲ್ಲ. 2017ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಹರಿರಾಮ್ ಶಂಕ‌ರ್ ಅವರು ಈ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button