
ಪ್ರಗತಿವಾಹಿನಿ ಸುದ್ದಿ: ಕರ್ತವ್ಯ ಲೋಪ ಆರೋಪದಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮಹೇಶ್ ಚಂದ್ರ ಅಮಾನತುಗೊಂಡ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಮಹೇಶ್ ಚಂದ್ರ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮಹೇಶ್ ಅವರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ವೇಳೆ ರೆಸಾರ್ಟ್ ನಿರ್ಮಾಣದ ವಿಚಾರದಲ್ಲಿ ವಿವಿಧ ದಾಖಲೆಗಳನ್ನು, ನಿಯಮ ಮೀರಿ ನಕಲಿ ದಾಖಲೆ ಸೃಷ್ಟಿಸಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹೇಶ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದರೂ ಸೂಕ್ತ ಉತ್ತರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ.