Latest

ಒಂದೆಡೆ ಪಂಚಮಸಾಲಿ; ಇನ್ನೊಂದೆಡೆ ಕುರುಬ ಸಮುದಾಯ; ಸಿಎಂ ಬಿಎಸ್ ವೈಗೆ ಮೀಸಲಾತಿ ಸಂಕಷ್ಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುರುಬ ಸಮುದಾಯ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಇಂದು ರಾಜಧಾನಿ ಬೆಂಗಳೂರಿನಲ್ಲಿ ಕಾಗಿನೆಲೆ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆದಿದೆ.

ಈ ಕುರಿತು ಮಾತನಾಡಿರುವ ಕಾಗಿನೆಲೆ ಶ್ರೀ, ಮೀಸಲಾತಿಗೆ ಸಂಬಂಧಿಸಿದಂತೆ ನಮ್ಮ ಪಾದಯಾತ್ರೆಗೆ ಉತ್ತಮ ಬೆಂಬಲ ಸಿಕ್ಕಿದೆ. ಇಂದು ಅಸಂಖ್ಯಾತ ಕುರುಬರು ಸಮಾವೇಶಕ್ಕೆ ಬಂದಿರುವುದು ಖುಷಿಯ ವಿಚಾರ ಎಂದು ಹೇಳಿದ್ದಾರೆ.

Home add -Advt

ಒಂದೆಡೆ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದರೆ ಇನ್ನೊಂದೆಡೆ ಕುರುಬ ಸಮುದಾಯದವರು ಎಸ್ ಟಿ ಮೀಸಲಾತಿಗಾಗಿ ಹೋರಾಟ ನಡೆಸಿದ್ದು, ಬೃಹತ್ ಸಮಾವೇಶ ಆಯೋಜಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಒಟ್ಟಾರೆ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಮೀಸಲಾತಿ ಸಂಕಷ್ಟ ಎದುರಾದಂತಾಗಿದೆ.

Related Articles

Back to top button