Kannada NewsKarnataka NewsLatest

*38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್*

ಸ್ವರೂಪ ಬದಲಾದರೂ ಮೂಲ ಆಶಯ ಮತ್ತು ವೃತ್ತಿ ಬದ್ಧತೆಯಲ್ಲಿ ಬದಲಾಗಬಾರದು: ಕೆ.ವಿ.ಪ್ರಭಾಕರ್ ಆಶಯ

ಪ್ರಗತಿವಾಹಿನಿ ಸುದ್ದಿ: ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

KUWJ ಆಯೋಜಿಸಿದ್ದ 38 ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ‘ಸರ್ಕಾರ ಮತ್ತು ಮಾಧ್ಯಮ’ ಕುರಿತ ಸಂವಾದ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

ಈಗ ಅಧಿಕಾರಸ್ಥರ ಮತ್ತು ಪತ್ರಕರ್ತರ ನಡುವೆ ಸಂಪರ್ಕ ಅನಿವಾರ್ಯ ಅನ್ನುವ ಸ್ಥಿತಿ ಬಂದಿದೆ. ಮೊದಲೆಲ್ಲಾ ಪತ್ರಕರ್ತರು ಅಧಿಕಾರಸ್ಥರ ಜತೆ ನಿಕಟ ಸಂಪರ್ಕ ಹೊಂದುವುದಕ್ಕೆ ಬಹಳ ಮುಜುಗರ ಅನುಭವಿಸುತ್ತಿದ್ದರು ಎಂದು ವಿವರಿಸಿದರು.

ಈಗ ಜಾಹಿರಾತು ತರುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿ ಆಗಿಬಿಟ್ಟಿದೆ. ತನಿಖಾ ಪತ್ರಿಕೋದ್ಯಮ ಮತ್ತು ಅಭಿವೃದ್ಧಿ ಪತ್ರಿಕೋದ್ಯಮದ ಹೊಣೆ ಹಿಂದಕ್ಕೆ ಸರಿದಿದೆ. ಸ್ವಾತಂತ್ರ್ಯ ನಂತರದ ಭಾರತೀಯ ಪತ್ರಿಕೋದ್ಯಮ ಅಭಿವೃದ್ಧಿ ಮತ್ತು ಜನಮುಖಿ ಪತ್ರಿಕೋದ್ಯಮವನ್ನು ಪ್ರಥಮ ಆಧ್ಯತೆಯನ್ನಾಗಿಸಿಕೊಂಡಿತ್ತು. ಈಗ ಬದಲಾದ ಸನ್ನಿವೇಶದಲ್ಲಿ, ಜವಾಬ್ದಾರಿ ಮತ್ತು ಹೊಣೆಗಾರಿಕೆಗಳೂ ಬದಲಾಗುತ್ತಿವೆ ಎಂದರು.

ಪತ್ರಕರ್ತರು ಮೊದಲು ತಮ್ಮ ಮತ್ತು ತಮ್ಮ ಕುಟುಂಬದ ಆರೋಗ್ಯ, ಯೋಗಕ್ಷೇಮದ ಕಡೆಗೂ ಗಮನ ಹರಿಸಬೇಕು. ಕೆಲಸದ ಒತ್ತಡದ ನಡುವೆಯೂ ಈ ದಿಕ್ಕಿನಲ್ಲೂ ಗಮನ ಹರಿಸಿ ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಮತ್ತು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಪತ್ರಕರ್ತ ಸಮುದಾಯದ ವೃತ್ತಿಪರತೆ ಮತ್ತು ಪ್ರಗತಿಗೆ ನೀಡಿದ ನೆರವುಗಳನ್ನು ಪಟ್ಟಿ ಮಾಡಿದ ಕೆ.ವಿ.ಪ್ರಭಾಕರ್ ಅವರು, ಈ ಬಾರಿಯ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಒದಗಿಸುವ ಕುರಿತು ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಪತ್ರಿಕಾ ವಿತರಕರನ್ನು ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು.

KUWJ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ಸೇರಿ ಸಂಘದ ಹಲವು ಪದಾಧಿಕಾರಿಗಳು ವೇದಿಲೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button