
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪತ್ರಕರ್ತರಿಗೆ ಸದಾ ನೆರವು ಮತ್ತು ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಸಿಎಂ ಭೇಟಿ ಮಾಡಿದಾಗ, ನನ್ನ ಗಮನಕ್ಕೆ ತಂದದ್ದನ್ನು ಕೂಡಲೇ ಮಂಜೂರು ಮಾಡಿಕೊಟ್ಟಿದ್ದು, ಮುಂದೆಯೂ ಮಾಡಿಕೊಡುವುದಾಗಿ ತಿಳಿಸಿದರು.
ಬಜೆಟ್ ನಲ್ಲಿ ಹಿಂದುಳಿದ ವರ್ಗಗಳಿಗೆ ಮಾಧ್ಯಮ ಕಿಟ್ ನೀಡುವುದು, ಪ್ರಾದೇಶಿಕ ಪತ್ರಿಕೆಗಳಿಗೆ ಉತ್ತೇಜನ ಸೇರಿದಂತೆ ಎರಡು ಬೇಡಿಕೆ ಈಡೇರಿಸಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿತು.
ಇನ್ನುಳಿದ ಬೇಡಿಕೆಗಳಿಗೆ ಪೂರಕ ಬಜೆಟ್ ನಲ್ಲಿ ಆದ್ಯತೆ ನೀಡಬೇಕು ಎಂದು ನಿಯೋಗ ಮನವಿ ಮಾಡಿತು. ಪತ್ರಕರ್ತರ ಕ್ಷೇಮ ನಿಧಿಗೆ ಕನಿಷ್ಠ 100 ಕೋಟಿ ರೂ ಮೀಸಲಿಡಬೇಕು ಎಂದು ಕಲಬುರಗಿಯಲ್ಲಿ ನಡೆದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನಿರ್ಣಯ ತೆಗೆದುಕೊಂಡಿದ್ದನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ನೆನಪಿಸಲಾಯಿತು. ಈ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ವಾರ್ತಾ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಹಾಜರಿದ್ದರು.
ಸಿಎಂ ಭೇಟಿ ಮಾಡಿದ ನಿಯೋಗದಲ್ಲಿ ಹಿರಿಯ ಪತ್ರಕರ್ತರಾದ ವೆಂಕಟಸಿಂಗ್, ಶಂಕರ ಪಾಗೋಜಿ, ಶ್ರೀಕಾಂತ್ ಶೇಷಾದ್ರಿ ಮತ್ತಿತರರು ಇದ್ದರು.
9 ತಿಂಗಳ ಮಗುವನ್ನು ಬಿಟ್ಟು ಆತ್ಮಹತ್ಯೆಗೆ ಶರಣಾದ ಬೆಳಗಾವಿ ಮೂಲದ ಪಿಡಿಓ ಪತ್ನಿ; ಪತಿ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ