Kannada NewsKarnataka News

*KUWJ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದ ಆಹ್ವಾನ ಪತ್ರಿಕೆ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಕೊಪ್ಪಳದಲ್ಲಿ ಭಾನುವಾರ ನಡೆಯಲಿರುವ ಕೆಯುಡಬ್ಲ್ಯೂಜೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದ ಆಹ್ವಾನ ಪತ್ರಿಕೆಗಳನ್ನು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಬಿಡುಗಡೆ ಮಾಡಲಾಯಿತು.

2025ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳನ್ನು ಭಾನುವಾರ ಸಾಧಕರಿಗೆ ಪ್ರದಾನ ಮಾಡಲಾಗುತ್ತಿದೆ. ಸಚಿವ ಶಿವರಾಜ ತಂಗಡಗಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಬೆಂಗಳೂರು ನಗರ ಘಟಕದ ಪದಾಧಿಕಾರಿಗಳಾದ
ವೈ.ಎಸ್.ಎಲ್.ಸ್ವಾಮಿ, ಸೋಮಶೇಖರ ಗಾಂಧಿ, ರಮೇಶ್ ಪಾಳ್ಯ, ಧ್ಯಾನ್ ಪೂಣಚ್ಚ, ಗಿರೀಶ್, ಜುಕ್ರಿಯ ಮತ್ತಿತರರು ಹಾಜರಿದ್ದರು.

Home add -Advt

Related Articles

Back to top button