Latest

*ಕಾರ್ಯನಿರತ ಪತ್ರಕರ್ತರಿಗೆ ಆನ್ ಲೈನ್ ವೋಟಿಂಗ್ ನೀಡಲು ಕೆಯುಡಬ್ಲ್ಯೂಜೆ ಒತ್ತಾಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪತ್ರಕರ್ತರಿಗೂ ಆನ್ ಲೈನ್ ವೋಟಿಂಗ್ ಮಾಡಲು ಅವಕಾಶ ಮಾಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಒತ್ತಾಯಿಸಿದೆ.

Home add -Advt

ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೆಯುಡಬ್ಲ್ಯೂಜೆ ಪತ್ರ ಬರೆದಿದ್ದು, ದೃಶ್ಯ ಮುದ್ರಣ, ರೇಡಿಯೋ ಮಾಧ್ಯಮಗಳ ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು ಪ್ರತಿ ಚುನಾವಣೆ ವೇಳೆಯಲ್ಲೂ ಮತದಾನದಿಂದ ವಂಚಿತರಾಗುತ್ತಿದ್ದಾರೆ ಎನ್ನುವ ವಿಷಯವನ್ನು ಗಮನಕ್ಕೆ ತಂದಿದೆ.

ಕಾರ್ಯದೊತ್ತಡದ ನಡುವೆ ತಮ್ಮ ಸ್ವಂತ ಕ್ಷೇತ್ರಗಳಿಗೆ ಹೋಗಿ ಚುನಾವಣೆ ದಿನ ಮತದಾನ ಮಾಡಲು ಆಗುತ್ತಿಲ್ಲ. ಹೀಗಾಗಿ ಬಹುತೇಕ ಪತ್ರಕರ್ತರು ಮತದಾನದಿಂದ ದೂರವೇ ಉಳಿಯುತ್ತಿದ್ದಾರೆ. ಆದ್ದರಿಂದ ಅಗತ್ಯವಿರುವ ಪತ್ರಕರ್ತರಿಗೂ ಆನ್ ಲೈನ್ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಿಕೊಡಬೇಕು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ವಿನಂತಿಸಿಕೊಂಡಿದ್ದಾರೆ.

Related Articles

Back to top button