Kannada NewsKarnataka NewsLatestPolitics

*ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವೇ ಅತ್ಯಂತ ಶ್ರೇಷ್ಠ ಅಂಗ: ಸಭಾಪತಿ ಹೊರಟ್ಟಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವು ಅತ್ಯಂತ ಶ್ರೇಷ್ಠ ಅಂಗವಾಗಿದ್ದು, ಆ ಕಾರಣಕ್ಕಾಗಿ ಎಲ್ಲಾ ಕ್ಷೇತ್ರಗಳಿಗೂ ಪತ್ರಕರ್ತರು ಸಮಾಜಕ್ಕೆ ಮಾದರಿಯಾಗಬೇಕೆಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರನ್ನು ಮತ್ತು ಮಾಹಿತಿ ಹಕ್ಕು ಆಯುಕ್ತರಾಗಿ ನೇಮಕಗೊಂಡಿರುವ ಪತ್ರಕರ್ತರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರವು ಪ್ರಮುಖವಾಗಿದ್ದು, ತಮ್ಮ ವೃತ್ತಿಯಲ್ಲಿ ಬದ್ಧತೆಯನ್ನು ಉಳಿಸುವ ಪತ್ರಕರ್ತರನ್ನು ಉತ್ತಮ ಸ್ಥಾನಮಾನಗಳು ಮತ್ತು ಗೌರವ ಹುಡುಕಿಕೊಂಡು ಬರುತ್ತದೆ. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರು ಮತ್ತು ಮಾಹಿತಿ ಆಯುಕ್ತರಾಗಿ ಆಯ್ಕೆಗೊಂಡಿರುವ ಪತ್ರಕರ್ತರು ನಿಜಕ್ಕೂ ಅಭಿನಂದನಾರ್ಹರು ಎಂದು ಹೇಳಿದರು.


ಈ ಸಮಾರಂಭದಲ್ಲಿ ಭಾಗವಹಿಸಿದ್ದು ಸಂತೋಷ ತಂದಿದೆ. ಕಾರ್ಯನಿರತ ಪತ್ರಕರ್ತರ ಸಂಘದ ಹಲವು ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದು, ಸಂಘವು ತಗಡೂರು ಅವರ ನೇತೃತ್ವದಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಎಂದು ಹೇಳಿದರು.

Home add -Advt

ಪತ್ರಕರ್ತರ ವೃತ್ತಿ ಕ್ಷೇತ್ರಕ್ಕೆ ಮನ್ನಣೆ: ಕೆವಿಪಿ
ಸಮಾರಂಭದಲ್ಲಿ ಅಭಿನಂದನಾ ನುಡಿಗಳನ್ನಾಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಮಾಧ್ಯಮ ವೃತ್ತಿ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮೆರೆದ ಪತ್ರಕರ್ತರನ್ನು ಉತ್ತಮ ಸ್ಥಾನಮಾನಗಳು ಹುಡುಕಿ ಬರುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. ಇಂತಹ ಪತ್ರಕರ್ತರನ್ನು ಗುರುತಿಸಿ ಕೆಯೂಡಬ್ಲ್ಯೂಜೆ ಏರ್ಪಡಿಸುವ ಅಭಿನಂದನಾ ಸಮಾರಂಭಗಳು ನಿಜಕ್ಕೂ ಶ್ಲಾಘನೀಯ ಎಂದರು.
ಸಂಘದ ರಾಜ್ಯಾಧ್ಯಕ್ಷರಾಗಿರುವ ಶಿವಾನಂದ ತಗಡೂರು ಅವರು, ಪತ್ರಕರ್ತರ ಪರವಾಗಿ ಸದಾ ಒಂದಿಲ್ಲೊಂದು ಬೇಡಿಕೆಗಳನ್ನು ಇಟ್ಟುಕೊಂಡು ಮುಖ್ಯಮಂತ್ರಿಗಳ ಬಳಿ ಬರುತ್ತಿರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಈ ನಿಟ್ಟಿನಲ್ಲಿ ಸ್ಪಂಧನೆ ಕೊಡುತ್ತಿದ್ದಾರೆ. ಬಸ್ ಪಾಸ್, ಪತರಕರ್ತರ ಆರೋಗ್ಯ ಯೋಜನೆ ಸೆರಿದಂತೆ ಪತ್ರಕರ್ತರ ಹಲವಾರು ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಕಠಿಣ ಷರತ್ತುಗಳನ್ನು ಸರಳೀಕರಣ ಮಾಡಲು ಪ್ರಯತ್ನ ನಡೆದಿದೆ ಎಂದರು.


ಸಂಕ್ರಾಂತಿ ಬಳಿಕ ಜಾಹಿರಾತು ನೀತಿಯನ್ನು ಜಾರಿ ಮಾಡಲು ಸಿದ್ಧತೆ ನಡೆದಿದೆ. ಇನ್ನು ಮುಂದೆಯೂ ಪತ್ರಕರ್ತರು ಹಲವಾರು ಸವಲತ್ತುಗಳನ್ನು ಪಡೆಯಲಿದ್ದಾರೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಸಂಘದ ಜೊತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಆತ್ಮೀಯ ಸಂಬಂಧವನ್ನಿರಿಸಿಕೊಂಡಿರುವುದು ಹೆಮ್ಮೆಯ ಸಂಗತಿ. ಸಿಎಂ ಮಾಧ್ಯಮ ಸಲಹೆಗಾರರಿಂದಲೂ ಸಂಘಕ್ಕೆ ಸದಾ ಪ್ರೋತ್ಸಾಹ ಸಿಗುತ್ತಿರುವುದು ನಮ್ಮ ಭಾಗ್ಯ ಎಂದರು. ಐಎ್ಡಬ್ಲೂೃಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ವಸತಿ ಸಚಿವರ ಮಾಧ್ಯಮ ಸಲಹೆಗಾರ ಕೆ.ಲಕ್ಷ್ಮಿ ನಾರಾಯಣ, ರಾಜ್ಯ ಸಂಘದ ಉಪಾಧ್ಯಕ್ಷರಾದ ಎಚ್.ಬಿ.ಮದನಗೌಡ ಅವರು ಮಾತನಾಡಿದರು.

ಕೆಯುಡಬ್ಲೂಜೆ ಗೌರವ ಸಮರ್ಪಣೆ:
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಿದ್ಧರಾಜು, ಬಿ.ಎಂ.ಹನ್ೀ, ಪೋಟೋ ಜರ್ನಲಿಸ್ಟ್ ಶಾಂತರಾಜು ಮತ್ತು ಮಾಹಿತಿ ಆಯೋಗದ ಆಯುಕ್ತರಾದ ವೆಂಕಟಸಿಂಗ್ ಹಾಗೂ ಮಹೇಶ್ ವಾಳ್ವೇಕರ್ ಅವರನ್ನು ಕೆಯುಡಬ್ಲೂೃಜೆ ವತಿಯಿಂದ ಗೌರವಿಸಲಾಯಿತು.
ಸಮಾರಂಭದಲ್ಲಿ ಕೆಯುಡಬ್ಲ್ಯೂಜೆ ಎಚ್.ಬಿ.ಮದನಗೌಡ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರೆಗೋಡು, ಖಜಾಂಚಿ ವಾಸುದೇವ ಹೊಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಪದಾಧಿಕಾರಿಗಳು, ಸದಸ್ಯರೂ ಸೇರಿದಂತೆ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕೆಯುಡಬ್ಲೂಜೆ ಲಾಂಛನ ಕಪ್:
ಸಮಾರಂಭದಲ್ಲಿ ಕೆಯುಡಬ್ಲೂಜೆ ಲಾಂಚನ ಹೊಂದಿದ ಕಾಫಿ ಕಪ್‌ನ್ನು ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅನಾವಣ ಮಾಡಿದರು. ಇದೇ ಸಂದರ್ಭದಲ್ಲಿ ಕೆಯುಡಬ್ಲೂೃಜೆ ಹೊರ ತಂದಿರುವ ಕ್ಯಾಲೆಂಡರ್‌ನ್ನು ಬಿಡುಗಡೆ ಮಾಡಲಾಯಿತು.

Related Articles

Back to top button