Latest

*ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗದಿಂದ ಸಿಎಂ ಭೇಟಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು.

ರಾಜ್ಯದ ಪತ್ರಕರ್ತರ ಕ್ಷೇಮಾಭಿವೃದ್ಧಿ ಗಾಗಿ 500 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು.

Home add -Advt

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಯಶಸ್ವಿನಿ ಯೋಜನೆಗೆ ಪತ್ರಕರ್ತರ ಸೇರ್ಪಡೆ, ಮಾಸಾಶನ ಹೆಚ್ಚಳ, ಕಾರ್ಮಿಕ ಇಲಾಖೆಯ ಮೂಲಕ ಅಗತ್ಯ ಸೌಲಭ್ಯಗಳು, ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಸಲ್ಲಿಸಿದರು.

ಮನವಿಯ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button