*ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್.ಕೆ.ಅಡ್ವಾಣಿ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರಿಂದ ಚಿಕಿತ್ಸೆ ನಡೆಸಲಾಗುತ್ತಿದೆ. ಎರಡು ದಿನಗಳ ಹಿಂದೆಯೇ ಅಡ್ವಾಣಿ (96) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನರರೋಗತಜ್ಞ ಡಾ.ವಿನಿತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. *ವಾಟ್ಸಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಎಂಜಿನಿಯರ್*