*ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್.ಕೆ.ಅಡ್ವಾಣಿ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರಿಂದ ಚಿಕಿತ್ಸೆ ನಡೆಸಲಾಗುತ್ತಿದೆ.Home add -Advt ಎರಡು ದಿನಗಳ ಹಿಂದೆಯೇ ಅಡ್ವಾಣಿ (96) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನರರೋಗತಜ್ಞ ಡಾ.ವಿನಿತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. *ವಾಟ್ಸಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಎಂಜಿನಿಯರ್*