Karnataka News

*ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆ ಲ್ಯಾಬ್ ಟೆಕ್ನಿಷಿಯನ್ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆ ಲ್ಯಾಬ್ ಟೆಕ್ನಿಷಿಯನ್ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಆರೋಗ್ಯ ಇಲಾಖೆಯ ಲ್ಯಾಬ್ ಟೆಕ್ನಿಷಿಯನ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮಂಜುನಾಥ್ (33) ಮೃತರು. ಮಂಜುನಾಥ್ ಅವರ ಮೃತದೇಹ ಠಾಕೂರ್ ಲೇಔಟ್ ಬಳಿ ಪತ್ತೆಯಾಗಿದೆ.

ಮಂಜುನಾಥ್ ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಮೃತ ಮಂಜುನಾಥ್ ಮೆದಿಕಿನಾಳದಲ್ಲಿರುವ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪತ್ನಿ ಲಕ್ಷ್ಮೀ ಹಾಗೂ ಇಬ್ಬರು ಮಕ್ಕಳೊಂದಿಗೆ ಮಸ್ಕಿ ಪಟ್ಟಣದಲ್ಲಿ ವಾಸವಾಗಿದ್ದರು. ಕಳೆದ ಎರಡು ದಿನಗಳಿಂದ ಏಕಾಏಕಿ ನಾಪತ್ತೆಯಾಗಿದ್ದ ಮಂಜುನಾಥ್ ಬೈಕ್ ಚರಡಿಯೊಂದರ ಬಳಿ ಪತ್ತೆಯಾಗಿತ್ತು. ಅಲ್ಲಿಯೇ ಮಂಜುನಾಥ್ ಶವ ಕೂಡ ಪತ್ತೆಯಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button