
ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ಮಧ್ಯೆಯೇ ಏಕಾಏಕಿ ಪಲ್ಟಿಯಾಗಿ ಬಿದ್ದು ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ವೇನಲ್ಲಿ ಈ ದುರಂತ ಸಂಭವಿಸಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನ ಹಿಂದಿನ ಸೀಟ್ ನಲ್ಲಿದ್ದ ಮೂವರು ಕಾರಿನಿಂದ ಕೆಳಗೆ ಅಪ್ಪಳಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಕಾರು ಚಾಲಕ ಹಾಗೂ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ದೆಹಲಿಯಿಂದ ಬಲಿಯಾಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಮೃತರನ್ನು ಜೈಪ್ರಕಾಶ್ (32), ಭೂಪೇಂದ್ರ (35) ಮತ್ತು ಕಪಿಲ್ (31) ಎಂದು ಗುರುತಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಯಶವಂತ್ (33) ಹಾಗೂ ಅವರ ಪಕ್ಕದಲ್ಲಿ ಕುಳಿತಿದ್ದ ಚಂದ್ರಕಾಂತ್ (35) ಗಾಯಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




