ಪ್ರಗತಿವಾಹಿನಿ ಸುದ್ದಿ: ಲಡಾಖ್ ನಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಬೆಳಗಾವಿ ಮೂಲದ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ.
ಮಹೇಶ್ ಮೃತ ಯೋಧ. ಡಿಸೆಬರ್ 14ರಂದು ಲಡಾಖ್ ನಲ್ಲಿ ಸಂಭವಿಸಿದ ಗುಡ್ಡ ಕುಸಿತದ ವೇಳೆ ಕರ್ತವ್ಯ ನಿರತ ಯೋಧ ಮಹೇಶ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸೇನಾ ಸಿಬ್ಬಂದಿ ಕಾರ್ಯಾಚಾರಣೆ ಮೂಲಕ ಮಹೇಶ್ ಶವ ಹೊರತೆಗಿದ್ದಾರೆ.
ಮಹೇಶ್ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದವರು. ಜಮ್ಮು-ಕಾಶ್ಮೀರದ ಲೇಹ್ ಗಡಿ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನೆನ್ನೆ ಬೆಳಗಾವಿಗೆ ಹುತಾತ್ಮ ಯೋಧ ಮಹೇಶ್ ಪಾರ್ಥಿವ ಶರೀರ ಆಗಮಿಸಿದ್ದು, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ