Latest
ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ರೆಕಾರ್ಡ್; ಸ್ಕ್ಯಾನಿಂಗ್ ಸೆಂಟರ್ ಸಿಬ್ಬಂದಿ ದುಷ್ಕೃತ್ಯ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ತೆಗೆಯುತ್ತಿದ್ದ ವ್ಯಕ್ತಿಯೋರ್ವನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ತುಮಕೂರಿನ ವಿಶ್ವಗುರು ಸ್ಕ್ಯಾನಿಂಗ್ ಸೆಂಟರ್ ನಲ್ಲಿ ನಡೆದಿದೆ.
ಸ್ಕ್ಯಾನಿಂಗ್ ಸೆಂಟರ್ ಸಿಬ್ಬಂದಿಯೇ ಆದ ಚಾಮರಾಜನಗರ ಮೂಲದ ಹರೀಶ್ ಎಂಬಾತ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರಿಕರಿಸುತ್ತಿದ್ದ.
ಕಿರಾತಕನ ಕೃತ್ಯ ಕಂಡು ಶಾಕ್ ಆದ ಮಹಿಳೆಯರು ಹಾಗೂ ಸಾರ್ವಜನಿಕರು, ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಹಿಗ್ಗಾ ಮುಗ್ಗಾ ಧರ್ಮದೇಟು ನೀಡಿದ್ದಾರೆ. ಬಳಿಕ ಹೊಸಬಡಾವಣೆ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ.
ಲೈಂಗಿಕ ಕಿರುಕುಳ ಪ್ರಕರಣ; ಮಹಿಳಾ ವೇದಿಕೆ ಸದಸ್ಯೆ ವಿರುದ್ಧ ಎಫ್ ಐಆರ್ ದಾಖಲು




