*ನೇಣುಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್ ಟೇಬಲ್ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಕಾನ್ಸ್ ಟೇಬಲ್ ಓರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರದಲ್ಲಿ ನಡೆದಿದೆ. ಮಂಜುಶ್ರೀ (27) ಮೃತ ಕಾನ್ಸ್ ಟೇಬಲ್. 2020-21ರಿಂದ ಪೊಲೀಸ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನ ಮೈಕೋ ಲೇಔಟ್ ಠಾಣೆಯಲ್ಲಿ ಕಾನ್ಸ್ ತೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲ ದಿನಗಳಿಂದ ಕೆಲಸಕ್ಕೆ ರಜೆ ಹಾಕಿದ್ದ ಮಂಜುಶ್ರೀ ಈಗ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. *ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಅರೆಸ್ಟ್*