Kannada NewsKarnataka NewsLatest

*ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಚಿಂತನೆ- ರಾಜು ಕಾಗೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಸಾರಿಗೆ ಇಲಾಖೆ ನಷ್ಟದಲ್ಲಿದೆ. ಹಾಗಾಗಿ ಟಿಕೆಟ್ ದರ ಹೆಚ್ಚಳ ಮಾಡೋ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು NWKSRTC ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಬಿಳಲಿದೆ.‌

ಮಾದ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಆಯಿಲ್ ಸೇರಿದಂತೆ ಹಲವು ಬಿಡಿ ಭಾಗಗಳ ಬೆಲೆ ಹೆಚ್ಚಳವಾಗಿದೆ. 4 ವರ್ಷಗಳಿಂದ ಬಸ್ ಟಿಕೆಟ್ ದರ ಹೆಚ್ಚಳವಾಗಿಲ್ಲ. ದರ ಹೆಚ್ಚಳ ಮಾಡುವುದರ ಬಗ್ಗೆ  ನಿರ್ಣಯ ಮಾಡುತ್ತೇವೆ.‌ ಶಕ್ತಿ ಯೋಜನೆಯಿಂದ ಆದಾಯ‌ ಬರುತ್ತಿದೆ. 400 ಬಸ್ಸುಗಳನ್ನು ಖರೀದಿಸಲಾಗಿದೆ. ಹಳೆಯ ಬಸ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಬಸ್ ಟಿಕೆಟ್ ದರ  ಏರಿಕೆ ಬಗ್ಗೆ ಚರ್ಚೆ ಮಾಡಿ ಒಂದು ಹಂತಕ್ಕೆ ತರುತ್ತೇವೆ ಎಂದು ತಿಳಿಸಿದರು. 

Related Articles

Back to top button