Karnataka NewsLatest

*ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಪುತ್ರನ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಕಾಂಗ್ರೆಸ್ ಶಾಸಕ ಹಾಗೂ ಪುತ್ರನ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಪರಶುರಾಮ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕುಟುಂಬದವರು ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಪುತ್ರ ಪಂಪನಗೌಡ ವಿರುದ್ಧ ಆರೋಪ ಮಾಡಿದ್ದರು.

ಪೋಸ್ಟಿಂಗ್ ಗಾಗಿ ಹಣಕ್ಕೆ ಬೇಡಿಕೆ ಹಾಗೂ ಕಿರುಕುಳ ನೀಡಿದ ಕಾರಣದಿಂದಲೇ ಪರಶುರಾಮ್ ಒತ್ತಡಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಪಿಎಸ್ಐ ಸಾವಿಗೆ ಶಾಸಕರು ಹಾಗೂ ಅವರ ಪುತ್ರನೇ ಕಾರಣ ಎಂದು ದೂರಿದ್ದರು. ಪರಶುರಾಮ್ ಪತ್ನಿ ಶ್ವೇತಾ ನೀಡಿದ ದೂರಿನ ಮೇರೆಗೆ ಯಾದಗಿರಿ ನಗರ ಠಾಣೆಯಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಪುತ್ರ ಪಂಪನಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.


Home add -Advt

Related Articles

Back to top button