ಪ್ರಗತಿವಾಹಿನಿ ಸುದ್ದಿ; ಬೀದರ್: ಆನ್ ಲೈನ್ ನಲ್ಲಿ ಹಣ ಕಳೆದುಕೊಂಡ ಉಪನ್ಯಾಸಕಿಯೊಬ್ಬರು ಡೆತ್ ನೋಡ್ ಬರೆದು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ನಲ್ಲಿ ನಡೆದಿದೆ.
28 ವರ್ಷದ ಆರತಿ ಕನಾಟೆ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರದಲ್ಲಿ ಈ ಘಟನೆ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆರತಿ ಕನಾಟೆ, ಪಾರ್ಟ್ ಟೈಂ ಮತ್ತೊಂದು ಉದ್ಯೋಗ, ಹಣ ದುಪ್ಪಟ್ಟು ನಿಟ್ಟಿನಲ್ಲಿ ಆನ್ ಲೈನ್ ನಲ್ಲಿ ಹಣ ಹೂಡಿಕೆ ಮಾಡಿದ್ದರು. ಹಂತ ಹಂತವಾಗಿ ಹಣ ಕಳೆದುಕೊಳ್ಳಲು ಆರಂಭಿಸಿದ್ದಾರೆ. 2.5 ಲಕ್ಷ ರೂಪಾಯಿ ಮೋಸವಾಗಿದೆ ಎನ್ನಲಾಗಿದೆ.
ತಾನು ಮೋಸ ಹೋಗಿದ್ದು ಗೊತ್ತಾಗುತ್ತಿದ್ದಂತೆ ಮನನೊಂದಿದ್ದ ಆರತಿ ಈಗ ದೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ ಪಪ್ಪಾ, ನಾನು ಯಾವ ತಪ್ಪೂ ಮಾಡಿಲ್ಲ. ಆನ್ ಲೈನ್ ನಲ್ಲಿ ಹಣ ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದೇನೆ. ಹಲವರಿಂದ ಹಣ ಪಡೆದು ಹೂಡಿಕೆ ಮಾಡಿದ್ದೆ. ಅವರಿಗೆ ಮುಖ ಕಾಣಿಸಲು ಆಗುತ್ತಿಲ್ಲ. ಬದುಕುವ ಆಸೆಯೇ ಇಲ್ಲದಾಗಿದೆ. ಜೀವನದಲ್ಲಿ ಜಿಗುಪ್ಸೆಯುಂಟಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಬಸವಕಲ್ಯಾಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ತಂದೆಯನ್ನು ಪೊಲೀಸರು ಚಿತ್ರಹಿಂಸೆ ಕೊಟ್ಟು ಸಾಯಿಸಿದ್ದಾರೆ: ಬಸನಗೌಡ ಪುತ್ರಿ ಆಕ್ರೋಶ
https://pragati.taskdun.com/latest/rohini-patilreactionbasanagouda-deathbelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ