
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಹಿಂದೆ ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ಎಂಬಾತನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ಇತ್ತೀಚೆಗೆ ತೆಗೆದು ಹಾಕಿದ್ದರು.
ದಾಳಿಯ ಬಗ್ಗೆ ಮೊದಲೇ ತಿಳಿದು ಮಾಹಿತಿಗಳನ್ನು ನೀಡುತ್ತಿದ್ದ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಿರಣ್ ನನ್ನು ಕೆಲಸದಿಂದ ತೆಗೆದಿದ್ದರು. ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಕಿರಣ್ ಪ್ರತಿಮಾ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ