Kannada NewsKarnataka NewsLatest

*ನಡು ರಸ್ತೆಯಲ್ಲಿ ಮಹಿಳಾ PSI ಮೇಲೆ ಹಲ್ಲೆ ನಡೆಸಿ, ಬಾಡಿ ಶೇಮಿಂಗ್ ಮಾಡಿ ಅವಮಾನ*

ನಾಲ್ವರ ವಿರುದ್ಧ ಪ್ರಕರಣ ದಾಖಲು

ಪ್ರಗತಿವಾಹಿನಿ ಸುದ್ದಿ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ ಪುಂಡರು ಕರ್ತವ್ಯನಿರತ ಮಹಿಳಾ ಪಿಎಸ್ಐ ಓರ್ವರ ಮೇಲೆ ಹಲ್ಲೆ ನಡೆಸಿ, ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಭಟ್ಟರಹಳ್ಳಿ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ನಯನಾ ಎಂಬ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳು ಕಟ್ಟದಾಗಿ ಮಾತನಾಡಿ, ಬಾಡಿಶೇಮಿಂಗ್ ಮಾಡಿದ್ದಾರೆ. ನಾಳೆಯೇ ನಿನ್ನನ್ನು ಸಸ್ಪೆಂಡ್ ಮಾಡಿಸುತ್ತೇವೆ ಎಂದು ಬೆದರಿಕೆ ಬೇರೆ ಹಾಕಿದ್ದಾರೆ.

ಈ ಬಗ್ಗೆ ಮಹಿಳಾ ಪಿಎಸ್ಐ ದೂರಿನ ಮೇರೆಗೆ ಕೆ.ಆರ್.ಪುರಂ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್ ಐಅರ್ ದಾಖಲಾಗಿದೆ. ಆರೋಪಿಗಳಾದ ಹೇಮಂತ್ ರೆಡ್ಡಿ, ರಾಧಾಕೃಷ್ಣ ರೆಡ್ಡಿ, ಹರ್ಷಿತ್ ರೆಡ್ಡಿ ಹಾಗೂ ರಾಹುಲ್ ಎಂಬುವವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಭಟ್ಟರಹಳ್ಳಿ ಜಂಕ್ಷನ್ ಬಳಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಎಂಬುವವರೊಂದಿಗೆ ಆರೋಪಿಗಳು ಕ್ಷುಲ್ಲಕ ಕಾರಣಕ್ಕೆ ಜಗಳವಾಡುತ್ತಿದ್ದರು. ಇದನ್ನು ಗಮನಿಸಿ ಗಲಾಟೆ ಬಿಡಿಸಲು ಸಂಚಾರಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನಯನಾ, ಸ್ಥಳಕ್ಕೆ ಆಗಮಿಸಿದ್ದಾರೆ. ಮಹಿಳಾ ಅಧಿಕಾರಿಯಾಗಿ ಕರ್ತವ್ಯ ಪಾಲನೆಗೆ ಮುಂದಾದ ವೇಳೆ ಆರೋಪಿಗಳು ಪಿಎಸ್‌ಐ ನಯನಾ ಮೇಲೆ ಹಲ್ಲೆ ನಡೆಸಿರುವುದಲ್ಲದೆ, ‘ಎಮ್ಮೆ ತರ ಇದ್ದೀಯಾ, ಹೊಟ್ಟೆಗೇನು ತಿಂತೀಯಾ?’ ಎಂದು ಬಾಡಿ ಶೇಮಿಂಗ್​ ಮಾಡಿದ್ದಾರೆ.​ ಅಷ್ಟೇ ಅಲ್ಲದೆ ‘ಇವಳನ್ನ ಇವತ್ತೇ ಸಸ್ಪೆಂಡ್ ಮಾಡಿಸುತ್ತೇನೆ’ ಎಂದು ಆವಾಜ್ ಹಾಕಿದ್ದಾರೆ.

ಈ ಘಟನೆಯ ಸಂಪೂರ್ಣ ವಿಡಿಯೋ ಪೊಲೀಸ್ ಸಿಬ್ಬಂದಿಯ ಬಾಡಿವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಕ್ಷ್ಯವನ್ನು ಆಧರಿಸಿ ನಾಲ್ವರು ಆರೋಪಿಗಳ ವಿರುದ್ಧ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button