ಪ್ರಗತಿವಾಹಿನಿ ಸುದ್ದಿ: ಹೋಟೆಲ್ ನಲ್ಲಿ ಮಹಿಳಾ ಭದ್ರತಾ ಸಿಬ್ಬಂದಿಯೊಬ್ಬರ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಹೋಟೆಲ್ ವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದ ಮಹಿಳೆಗೆ ಖಾಯಂ ಕೆಲಸ ಕೊಡಿಸುವುದಾಗಿ ಹೇಳಿ ಆರೋಪಿ ಅಭಿಷೇಕ್ ಸಿಂಗ್ ಆಮಿಷವೊಡ್ದಿದ್ದ. ಭೇಟಿಯಾಗುವಂತೆ ತಿಳಿಸಿದ್ದಾನೆ. ಭೇಟಿಗೆ ಬಂದ ಮಹಿಳೆಗೆ ಕುಡಿಯುವ ಪಾನೀಯದಲ್ಲಿ ಮತ್ತುಬರಿಸುವ ಔಷದ ನೀಡಿ ಬಳಿಕ ಅತ್ಯಾಚಾರವೆಸಗಿದ್ದನೆ ಎಂದು ಆರೋಪಿಸಲಾಗಿದೆ.
ಪ್ರಜ್ಞೆ ಕಳೆದುಕೊಂಡಿದ್ದ ಮಹಿಳೆ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದಾನೆ. ಈ ಘಟನೆ ಡಿಸೆಂಬರ್ 30ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ