Kannada NewsKarnataka News

*ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಲೇಡಿ ಸಬ್‌ ಇನ್ಸ್‌ಪೆಕ್ಟರ್‌*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ವ್ಯಕ್ತಿಯೋರ್ವರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ರೆಡ್‌ ಹ್ಯಾಂಡ್‌ ಆಗಿ ಸೆರೆ ಹಿಡಿದಿರುವ ಘಟನೆ ಮೈಸೂರಿನಲ್ಲಿ  ನಡೆದಿದೆ.

Home add -Advt

ಮೈಸೂರಿನ ಕುವೆಂಪು ನಗರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ರಾಧಾ ಕ್ರಿಮಿನಲ್‌ ಕೇಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕುವೆಂಪು ನಗರ ವ್ಯಕ್ತಿಯಿಂದ 25 ಸಾವಿರ ರೂ ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು,  ಹಣದೊಂದಿಗೆ ಸಬ್‌ ಇನ್ಸ್‌ಪೆಕ್ಟರ್‌ ಲಾಕ್ ಆಗಿದ್ದಾರೆ.

ಕ್ರಿಮಿನಲ್ ಕೇಸ್ ಸಂಬಂಧ ಐವತ್ತು ಸಾವಿರ ನೀಡುವಂತೆ ರಾಧಾ ವ್ಯಕ್ತಿ ಒಬ್ಬರಿಗೆ ಒತ್ತಾಯಿಸಿದ್ದರು, ಈ ಬಗ್ಗೆ ಆ ವ್ಯಕ್ತಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ಹಾಗಾಗಿ ಗುರುವಾರ 25000 ರೂ ನೀಡುವಾಗಲೇ ಮೈಸೂರು ಲೋಕಾಯುಕ್ತ ಎಸ್ ಪಿ ಮೋಹನ್ ಕುಮಾ‌ರ್ ನೇತೃತ್ವದಲ್ಲಿ ಮೈಸೂರು ಚಾಮರಾಜನಗರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರಾಧಾ ಅವರನ್ನು ಬಂಧಿಸಿದ್ದಾರೆ. ಲೋಕಾಯುಕ್ತರು ಸಬ್‌ ಇನ್ಸ್‌ಪೆಕ್ಟರ್‌ ರಾಧಾ ಅವರನ್ನು ವಿಚಾರಣೆಗೆ ಒಳಪಡಿಸುತ್ತಿದಂತೆ ಕಣ್ಣಿರು ಹಾಕಿದ್ದಾಗಿ ತಿಳಿದುಬಂದಿದೆ.

Related Articles

Back to top button