
ಕುತೂಹಲ ಮೂಡಿಸಿದ ಮಾತುಕತೆ
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಬೆನ್ನಲ್ಲೇ ಇನ್ನಷ್ಟು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದರೆ ಎಂಬ ಮಾತು ಕೇಳಿಬರುತ್ತಿದೆ. ಅಲ್ಲದೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯನ್ನು ವಾಪಾಸ್ ಕರೆಸಿಕೊಳ್ಳಲು ಬಿಜೆಪಿ ಯತ್ನ ನಡೆಸಿದೆ ಎಂಬ ಚರ್ಚೆ ರಾಜ್ಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಕಾಂಗ್ರೆಸ್ ನಾಯಕರು ಪಕ್ಷದ ನಾಯಕರನ್ನು ಕರೆದು ಮಾತುಕತೆ ನಡೆಸಿದ್ದಾರೆ.
ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗುತ್ತಿದ್ದಂತೆ ಅಥಣಿ ಶಾಸಕ, ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರನ್ನು ಕರೆದು ಡಿಸಿಎಂ ಡಿ.ಕೆ.ಶಿವಕುಮಾರ್ ಚರ್ಚಿಸಿದ್ದಾರೆ. ಶಾಸಕ ಲಕ್ಷ್ಮಣ ಸವದಿ ಇಂದು ಸದಾಶಿವನಗರದ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಡಿಸಿಎಂ ತಿಳಿಸಿದ್ದಾರೆ.
ಇನ್ನು ಡಿ.ಕೆ.ಶಿವಕುಮಾರ್ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ನಾನು ಯಾವ ಕಾರಣಕ್ಕೂ ಪಕ್ಷ ಬಿಡಲ್ಲ. ಮತ್ತೆ ಬಿಜೆಪಿಗೆ ಸೇರುವ ಪ್ರಶ್ನೆಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ