Belagavi NewsBelgaum NewsKarnataka NewsPolitics

*ಕೆರೆ ತುಂಬುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ: ಶಾಸಕ ರಾಜು ಕಾಗೆ*

ಪ್ರಗತಿವಾಹಿನಿ ಸುದ್ದಿ: ಈಗಾಗಲೇ ಟೆಂಡರ್ ಪ್ರಕ್ರಿಯೆ ಸಹ‌ ಮುಗಿದಿದೆ ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಸಹ ನೀಡಲಾಗಿದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಅವರು ಹೇಳಿದರು.

ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗುಂಡೇವಾಡಿ ಮತ್ತು ಶಿರಗುಪ್ಪಿ ಗ್ರಾಮದಲ್ಲಿ ತಲಾ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಎಸಿ ಟಿಸಿಪಿ ಅನುದಾನದಡಿ ಮಂಜೂರಾದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು.
ಕಾಗವಾಡ ಮತಕ್ಷೇತ್ರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಕೆರೆ ತುಂಬುವ ಯೋಜನೆಗೆ ಸುಮಾರು 220 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗೆ ಅತೀ ಶೀಘ್ರದಲ್ಲೇ ಚಾಲನೆ ದೊರೆಯಲಿದ್ದು ಈಗಾಗಲೇ ಈ ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳು ಮುಗಿದಿದೆ ಎಂದು ಹೇಳಿದರು.

ಮೂಡಾ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ರಾಜು ಕಾಗೆ ಪಂಚಗ್ಯಾಂರಟಿಗಳಿಂದ ನಮ್ಮ ಸರ್ಕಾರ ಸುಭದ್ರವಾಗಿದೆ ಮುಖ್ಯಮಂತ್ರಿ ಅವರ ಮೇಲೆ ಇಲ್ಲದ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಆರೋಪಗಳು ಸತ್ಯಕ್ಕೆ ದೂರವಾಗಿದ್ದು ನಮ್ಮ ಸರ್ಕಾರ ಇನ್ನೂ ಇಪ್ಪತ್ತು ವರ್ಷಗಳ ಕಾಲ ಆಡಳಿತ ಮಾಡಲಿದೆ ಎಂದರು ಹೇಳಿದರು

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button