ಲಖನ್ ಸ್ಪರ್ಧೆ ಎಫೆಕ್ಟ್ ತಪ್ಪಿಸಿಕೊಳ್ಳಲು ಕಾರ್ಯತಂತ್ರ; ಬಾಲಚಂದ್ರ ಜಾರಕಿಹೊಳಿ ಜೊತೆ ಕವಟಗಿಮಠ ಸುದೀರ್ಘ ಚರ್ಚೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಡಿ. ೧೦ ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಜೊತೆಗೆ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯ ಖಾಸಗಿ ಹೊಟೆಲ್ ಒಂದರಲ್ಲಿ ಸುದೀರ್ಘ ಚರ್ಚೆ ನಡೆಸಿದರು.
ಲಖನ್ ಜಾರಕಿಹೊಳಿ ಪಕ್ಷೇತರರಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮೇಲೆ ಉಂಟಾಗಬಹುದಾದ ಪರಿಣಾಮ ಮತ್ತು ಅದನ್ನು ಎದುರಿಸಲು ಅನುಸರಿಸಬೇಕಾದ ತಂತ್ರಗಳ ಕುರಿತು ಚರ್ಚಿಸಲಾಯಿತು. ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಉಂಟಾಗಬಹುದಾದ ಹೊಡೆತ ತಪ್ಪಿಸಿಕೊಳ್ಳುವ ಕುರಿತು ಕವಟಗಿಮಠ ಅವರು ಬಾಲಚಂದ್ರ ಅವರಿಂದ ಸಲಹೆಗಳನ್ನು ಪಡೆದರು.
ಮೂರನೇ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸಲು ಎಲ್ಲ ಬಿಜೆಪಿ ಮುಖಂಡರು ಒಂದಾಗಿ ಶ್ರಮಿಸಬೇಕು. ಕಾರ್ಯಕರ್ತರು ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸಬೇಕು ಎಂದು ಬಾಲಚಂದ್ರ ಅಭಿಪ್ರಾಯಪಟ್ಟರು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಬಿಜೆಪಿಯವರು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ – ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ