
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರೆಬಲ್ ನಾಯಕರ ಟೀಮ್ ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಎಂಎಲ್ ಸಿ ಲಖನ್ ಜಾರಕಿಹೊಳಿಯವರನ್ನು ಭೇಟಿಯಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿರುವ ಎಂಎಲ್ ಸಿ ಲಖನ್ ಜಾರಕಿ ಹೊಳಿ ನಿವಾಸಕ್ಕೆ ತೆರಳಿರುವ ರಮೇಶ್ ಜಾರಕಿಹೊಳಿ ನೇತೃತ್ವದ ಬಿಜೆಪಿ ರೆಬಲ್ ನಾಯಕರು, ಲಖನ್ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ ಮಾಜಿ ಶಾಸಕ ಅರವಿಂದ್ ಲಿಂಬಾವಳಿ, ನೀವು ನಮ್ಮ ಟೀಂ ಗೆ ಬರ್ತೀರಿ ಎಂದು ಹೇಳಿ ರಮೇಶ್ ಜಾರಕಿಹೊಳಿ ನಮ್ಮನ್ನು ಕರೆದುಕೊಂಡು ಬಂದಿದ್ದಾರೆ ಎಂದಿದ್ದಾರೆ. ಇದಕ್ಕೆ ಲಖನ್ ಜಾರಕಿಹೊಳಿ, ನಾವು ನಿಮ್ಮ ಟಿಮ್ ನಲ್ಲಿ ಇದ್ದಂಗೆ ಎಂದು ಭರವಸೆ ನೀಡಿದ್ದಾರೆ.
ಶಾಸಕ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಬಿ.ಪಿ.ಹರೀಶ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದಾರೆ.