*ಬೆಳಗಾವಿಯ ಕನ್ನಡ ರಾಜ್ಯೋತ್ಸವಕ್ಕೆ ಲಕ್ಷಾಂತರ ಜನ ಸಾಕ್ಷಿ*: *ಕುಣಿದು ಕುಪ್ಪಳಿಸಿದ ಯುವ ಸಮೂಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಡೆದ 71ನೇ ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನಿಗಳ ಅಭೂತಪೂರ್ವ ಸಂಭ್ರಮಕ್ಕೆ ಸಾಕ್ಷಿಯಾಯಿತು.  ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ಮೇಲಿನ ಪ್ರೀತಿ ಹಾಗೂ ಅಭಿಮಾನವನ್ನು ಸಾರಲು ಲಕ್ಷಾಂತರ ಕನ್ನಡಾಭಿಮಾನಿಗಳು ನಗರದ ಐತಿಹಾಸಿಕ ರಾಣಿ ಚನ್ನಮ್ಮ ವೃತ್ತದಲ್ಲಿ ಒಂದಾಗಿ ರಾಜ್ಯೋತ್ಸವದ ವೈಭವವನ್ನು ಮತ್ತಷ್ಟು ಹೆಚ್ಚಿಸಿದರು. ಶನಿವಾರ ಸಂಜೆಯಿಂದಲೇ ಆರಂಭಗೊಂಡಿದ್ದ ರಾಜ್ಯೋತ್ಸವದ ಸಂಭ್ರಮ ಭಾನುವಾರ ಇಡೀ ದಿನ ನಗರಾದ್ಯಂತ ಮನೆಮಾಡಿತ್ತು. ಜಿಲ್ಲೆಯ ವಿವಿಧ ತಾಲೂಕುಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಯುವಕರು, … Continue reading *ಬೆಳಗಾವಿಯ ಕನ್ನಡ ರಾಜ್ಯೋತ್ಸವಕ್ಕೆ ಲಕ್ಷಾಂತರ ಜನ ಸಾಕ್ಷಿ*: *ಕುಣಿದು ಕುಪ್ಪಳಿಸಿದ ಯುವ ಸಮೂಹ*