ಲಕ್ಕುಂಡಿ ಹಂಪಿ ಸರ್ಕ್ಯೂಟ್ ನ ಭಾಗವಾಗಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಗದಗ: ಹಂಪಿ ಸರ್ಕ್ಯೂಟ್ ನಲ್ಲಿ ಲಕ್ಕುಂಡಿಯನ್ನು ಸೇರಿಸಲು ಈಗಾಗಲೇ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಲಕ್ಕುಂಡಿ ಕ್ಷೇತ್ರವು ಹಂಪಿ ಸರ್ಕೀಟ್ ನ ಭಾಗವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ರೋಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ರೋಣದ ಅಭಿವೃದ್ದಿಗೆ ಎಲ್ಲ ಕ್ರಮ:
ರೋಣ ಕ್ಷೇತ್ರದಲ್ಲಿ ಕೈಗಾರಿಕಾ ಅಭಿವೃದ್ದಿಯಾಗಿಲ್ಲ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಇಡೀ ರಾಜ್ಯದ ಅಭಿವೃದ್ಧಿಗೆ ಬದ್ದವಾಗಿದೆ. ರೋಣದ ಅಭಿವೃದ್ದಿಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದಾಖಲೆ ಪಡೆದು ಪರಿಹಾರ :
ಕೋವಿಡ್ ನಿಂದಾಗಿ ಮೃತಪಟ್ಟ ಗ್ರಾಮ ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯರ ಕುಟುಂಬದವರಿಗೆ ಇನ್ನೂ ಪರಿಹಾರ ನೀಡಲಾಗಿಲ್ಲ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ವಿವರ ತರಿಸಿಕೊಂಡು, ಕೋವಿಡ್ ನಿಂದಲೇ ಮೃತಪಟ್ಟಿರುವ ಬಗ್ಗೆ ದಾಖಲೆ ಪಡೆದು ಪರಿಹಾರವನ್ನು ಖಂಡಿತ ಒದಗಿಸಲಾಗುವುದು ಎಂದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button