ಪ್ರಗತಿವಾಹಿನಿ ಸುದ್ದಿ: ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಇಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಅವರು ಸಿಎಂ ಪರ ಬ್ಯಾಟ್ ಬೀಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಬದಲಾವಣೆ ಕೇವಲ ಹಗಲುಗನಸು. ಸಿಎಂ ಬದಲಾವಣೆ ಕೇವಲ ಊಹಾಪೋಹ ಅಷ್ಟೇ. ಒಳ್ಳೆಯ ಮುಖ್ಯಮಂತ್ರಿಗೆ ಕಪ್ಪು ಚುಕ್ಕೆ ಹಚ್ಚುವ ಕಾರ್ಯ ಬಿಜೆಪಿಯಿಂದ ನಡೆಯುತ್ತಿದೆ. ಬಿಜೆಪಿಯವರಿಗೆ ಮಾಡೋದಕ್ಕೆ ಕೆಲಸವಿಲ್ಲ. 20 ವರ್ಷಗಳ ಹಿಂದಿನ ವಿಷಯವಿದು. ಅದಕ್ಕಾಗಿ ಅನಾವಶ್ಯಕ ಚರ್ಚೆಗಳನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಬಿಜೆಪಿ ನಾಯಕರಿಗೆ ಲಕ್ಷ್ಮಣ ಸವದಿ ಟಾಂಗ್ ಕೊಟ್ಟಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ