
ಪ್ರಗತಿವಾಹಿನಿ ಸುದ್ದಿ, ಅಥಣಿ – ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಇಂದು ಅಥಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ವ್ಯೆದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರೊಡನೆ ಕೊರೋನ ನಿಗ್ರಹಿಸಲು ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ಸಭೆ ನಡೆಸಿದರು.
ಅಣ್ಣನ ಮಗ ಮತ್ತು ಸಹೋದರ ಸಂಬಂಧಿ ಇಬ್ಬರ ಸಾವಿನ ನೋವಿನ ಮಧ್ಯೆಯೂ ಲಕ್ಷ್ಮಣ ಸವದಿ ತಮ್ಮ ಕೆಲಸವನ್ನು ಮುಂದುವರಿಸಿದ್ದಾರೆ.

ತಾಲೂಕಿನಲ್ಲಿ ಔಷಧೋಪಚಾರಗಳಿರಲಿ ಅಥವಾ ಆಕ್ಸಿಜನ್ ಕೊರತೆಯಾದರೆ ಕೂಡಲೇ ನನ್ನ ಗಮನಕ್ಕೆ ತರುವಂತೆ ಕೂಡ ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ಕೋವಿಡ್ ಮಹಾಮಾರಿ ಹಿಮ್ಮೆಟ್ಟಿಸಲು ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸಬೇಕಾಗಿದೆ ಈ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಕೆಲಸ ನಿರ್ವಹಿಸದೇ ಇರುವಂತವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಕೂಡ ಸೂಚಿಸಿದರು .
ಈ ಸಭೆಯಲ್ಲಿ ತಹಸೀಲ್ದಾರ್ ದುಂಡಪ್ಪ ಕೋಮರ್ , ಡಿವೈಎಸ್ಪಿ ಗಿರೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ