Kannada NewsKarnataka News

ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ ಲಕ್ಷ್ಮಣ ಸವದಿ; ಕಾಂಗ್ರೆಸ್ MLC ಚನ್ನರಾಜ ಸಾಥ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಥಣಿ ವಿಧಾನಸಭಾ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಪಕ್ಷದ ವಿರುದ್ಧವೇ ಬಂಡಾಯದ ಬಾವುಟ ಹಾರಿಸಿ ಅಥಣಿಯಲ್ಲಿ ಬೃಹತ್ ಸಮಾವೇಶ ನಡೆಸಿ ಸ್ವಾಭಿಮಾನದ ಶಪಥ ಮಾಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಶುಕ್ರವಾರ ಬೆಳಗಾವಿ ವಿಮಾನ‌ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದರು.

ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ಸವದಿ, ನಂತರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವರು. ಆ ನಂತರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರಲಿದ್ದಾರೆ ಎಂದು ಗೊತ್ತಾಗಿದೆ.

ಲಕ್ಷ್ಮಣ ಸವದಿ ಜೊತೆಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಹ ಬೆಂಗಳೂರಿಗೆ ತೆರಳಿದರು.

https://pragati.taskdun.com/do-you-know-the-vow-made-by-lakshmana-savadi-in-the-big-conference/

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button