
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಕರ್ನಾಟಕದ್ದು, ಸೂರ್ಯ-ಚಂದ್ರರಿರುವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಡಿಸಿಎಂ ಲಕ್ಷ್ಮಣಸವದಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ಖಂಡನೀಯ. ಅನಗತ್ಯ ಗೊಂದಲವನ್ನುಂಟು ಮಾಡುವ ಉದ್ದೇಶದಿಂದ ಅವರು ಅಂತಹ ಹೇಳಿಕೆಗಳನ್ನು ನೀಡುತ್ತಿ ರಾಜ್ಯದ ಯಾವುದೇ ಭಾಗದ ಬಗ್ಗೆಯೂ ಕ್ಯಾತೆ ತೆಗೆಯುವ ಗತ್ಯವಿಲ್ಲ ಎಂದರು.
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿನ್ನೆ ಬೆಳಗಾವಿ, ನಿಪ್ಪಾಣಿ, ಕಾರವಾರ ನಮ್ಮದು. ಅಖಂಡ ಮಹಾರಾಷ್ಟ್ರಾ ಠಾಕ್ರೆ ಅವರ ಕನಸಾಗಿತ್ತು ಎಂದಿದ್ದರು. ಮಹಾ ಡಿಸಿಎಂ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ