*ಕಾಂಗ್ರೆಸ್ ಗೆ ಸೇರ್ಪಡೆಯಾಗ್ತಾರಾ ಲಕ್ಷ್ಮಣ ಸವದಿ?; ಏನಿದು ಬೆಳವಣಿಗೆ* *ಮಾ.21ರಂದೇ ಪ್ರಗತಿವಾಹಿನಿ ಪ್ರಕಟಿಸಿತ್ತು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಮಹೇಶ್ ಕುಮಟಳ್ಳಿ ನಡುವೆ ಬಿಗ್ ಫೈಟ್ ನಡೆಯುತ್ತಿರುವುದು ಹೊಸ ಸುದ್ದಿಯೇನಲ್ಲ. ಈ ಕ್ಷೇತ್ರದ ಟಿಕೆಟ್ ಹಂಚಿಕೆ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.
ಇದರ ಬೆನ್ನಲ್ಲೇ ಲಕ್ಷ್ಮಣ ಸವದಿ ಕಾಂಗ್ರೆಸ್ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿರುವ ಸಂಗತಿ ಬೆಳಕಿಗೆ ಬಂದಿದೆ.
ಒಂದೆಡೆ ಅಥಣಿ ಟಿಕೆಟ್ ಗಾಗಿ ಲಕ್ಷಣ ಸವದಿ ಬಿಜೆಪಿ ನಾಯಕರಿಗೆ ಒತ್ತಡ ಹೇರುತ್ತಿದ್ದರೆ ಮತ್ತೊಂದೆಡೆ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ. ಬಿಜೆಪಿ ವರಿಷ್ಠರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಬೆಳವಣಿಗೆ ನಡುವೆಯೇ, ಕಳೆದ 20 ದಿನದಿಂದಲೂ ಕಾಂಗ್ರೆಸ್ ನಾಯಕರ ಜೊತೆ ಲಕ್ಷ್ಮಣ ಸವದಿ ಸತತ ಸಂಪರ್ಕದಲ್ಲಿದ್ದು, ಬಿಜೆಪಿ ಕೈ ಕೊಟ್ಟರೆ ಕಾಂಗ್ರೆಸ್ ಕೈ ಹಿಡಿಯುವುದು ಖಚಿತ ಎನ್ನಲಾಗಿದೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗಾಗಿ ಕಾಯುತ್ತಿರುವ ಸವದಿ, ಒಂದು ವೇಳೆ ಬಿಜೆಪಿ ಪಟ್ಟಿಯಲ್ಲಿ ತಮಗೆ ಟಿಕೆಟ್ ಕೈತಪ್ಪಿದರೆ ಕಾಂಗ್ರೆಸ್ ನತ್ತ ಮುಖ ಮಾಡುವ ಸಾಧ್ಯತೆ ದಟ್ಟವಾಗಿದೆ.
ಅಥಣಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಚ್ಛರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಪ್ರಗತಿವಾಹಿನಿ ಮಾರ್ಚ್ 21ರಂದೇ ಪ್ರಕಟಿಸಿತ್ತು. ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ಕುರಿತ ಬೆಳವಣಿಗೆಯ ಸುಳಿವು ಆಗಲೇ ಪ್ರಗತಿವಾಹಿನಿಗೆ ಸಿಕ್ಕಿತ್ತು.
ಈಗಲೂ ಬಿಜೆಪಿ ಲಕ್ಷ್ಮಣ ಸವದಿಯನ್ನು ಉಳಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದೆ. ಕೊನೆಯ ಗಳಿಗೆಯ ಬೆಳವಣಿಗೆ ಕುತೂಹಲಕರಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ