Kannada NewsKarnataka NewsLatestPolitics

*ಶೆಟ್ಟರ್ ಬಿಜೆಪಿಗೆ ವಾಪಸ್; ಲಕ್ಷ್ಮಣ್ ಸವದಿ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮಿಪಿಸುತ್ತಿದ್ದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರನ್ನೂ ವಾಪಾಸ್ ಕರೆತರಲು ಬಿಜೆಪಿ ಯತ್ನ ನಡೆಸಿದೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಇದೀಗ ಸ್ವತಃ ಲಕ್ಷ್ಮಣ್ ಸವದಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗಿದ್ದು ಯಾಕೆಂದು ಗೊತ್ತಿಲ್ಲ. ಅವರ ರಾಜೀನಾಮೆ ವೈಯಕ್ತಿಕ. ಈ ಬಗ್ಗೆ ನಾನು ಮಾತನಾಡಲ್ಲ. ಅವರು ಬಿಜೆಪಿಗೆ ಮರಳಿದ್ದರಿಂದ ಕಾಂಗ್ರೆಸ್ ಗೆ ಡ್ಯಾಮೇಜ್ ಏನೂ ಆಗಲ್ಲ ಎಂದು ಹೇಳಿದರು.

ಇದೇ ವೇಳೆ ನಾನಂತು ಮತ್ತೆ ಬಿಜೆಪಿಗೆ ಹೋಗುವ ಪ್ರಶ್ನೆ ಇಲ್ಲ. ನಾನು ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಲ್ಲ ಎಂದು ಸ್ಪಷ್ಟಪಡಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button