
ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ ಎಂದು ಮಾಜಿ ಡಿಸಿಎಂ, ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ಬಿಜೆಪಿ ಮನೆಯೊಂದು 6 ಬಾಗಿಲು ಎನ್ನುವಂತಾಗಿದೆ. ಲೀಡರ್ ಲೆಸ್ ಪಾರ್ಟಿಯಾಗಿದೆ. ಸಣ್ಣಪುಟ್ಟ ವೈಮನಸ್ಸು ಸರಿಪಡಿಸುವ ಸಾಮರ್ಥ್ಯ ಕೂಡ ಯಾರಿಗೂ ಇಲ್ಲದಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ನಶಿಸಿ ಹೋಗುವುದು ಕಾಣಿಸುತ್ತಿದೆ ಎಂದು ಭವಿಷ್ಯ ನುಡಿದ್ದಿದ್ದಾರೆ.
ಬಿಜೆಪಿಯ 8 ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿರುವ ಮಾತು ನಿಜ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಆಲ್ ಮೋಸ್ಟ್ ಕಾಂಗ್ರೆಸ್ ಗೆ ಬಂದಾಗಿದೆ. ಶೀಘ್ರದಲ್ಲಿಯೇ ಇನ್ನಷ್ಟು ಶಾಸಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದು ಹೇಳಿದರು.
ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ಸೇರಿದಂತೆ ಆ ಭಾಗಗಳಲ್ಲಿ ಬಿಜೆಪಿಯನ್ನು ಬೆಳೆಸಿದವರು. ಯೋಗೇಶ್ವರ್ ಗೆ ಟಿಕೆಟ್ ಕೊಡದಿದ್ದಕ್ಕೆ ಅವರು ಪಕ್ಷದಿಂದ ಹೊರಬಂದಿದ್ದಾರೆ. ಪಕ್ಷದ ಮೂಲ ಮುಖಂಡರ ಸಾಧಕ-ಬಾಧಕ ನೋಡಬೇಕು. ಏಕಾಏಕಿ ಯಾರೋ ಒಬ್ಬರನ್ನು ಚುನಾವಣೆಗೆ ನಿಲ್ಲಿಸಿಬಿಟ್ರೆ ಹಳಬರು ಏನು ಮಾಡಬೇಕು? ಎಂದು ಪ್ರಶ್ನಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ