Latest

ಸಾರಿಗೆ ನೌಕರರ ಬೇಡಿಕೆ ಸಧ್ಯಕ್ಕೆ ಈಡೇರಿಸಲಾಗದು ಎಂದ ಸಚಿವ ಸವದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ಈ ನಡುವೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸಧ್ಯಕ್ಕೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸವದಿ, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸಾರಿಗೆ ಸಿಬ್ಬಂದಿಗಳ ಮನವೊಲಿಕೆ ಮಾಡಿ ಕೆಲಸಕ್ಕೆ ಹಾಜರಾಗಲು ಮನವಿ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳ ಜೊತೆ ಒಂದು ಸುತ್ತಿನ ಸಭೆ ನಡೆದಿದೆ. ನಮ್ಮ ಹಣಕಾಸಿನ ಇತಿಮಿತಿಯೊಳಗೆ ನೌಕರರ ಬೇಡಿಕೆ ಈಡೇರಿಸಲು ಯತ್ನಿಸುತ್ತೇವೆ ಎಂದರು.

Home add -Advt

ಸಾರಿಗೆ ನೌಕರರ ಮುಷ್ಕರ, ಬಸ್ ಗಳ ಮೇಲೆ ಕಲ್ಲು ತೂರಾಟ ಇವುಗಳ ಹಿಂದೆ ಕಾಣದ ಶಕ್ತಿಗಳ ಕೈವಾಡವಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.

Related Articles

Back to top button