Latest

ಮುಷ್ಕರ ವಾಪಸ್ ಪಡೆಯುವಂತೆ ಸಾರಿಗೆ ನೌಕರರಿಗೆ ಸವದಿ ಮನವಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ನೌಕರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.

ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ, ಸಾರಿಗೆ ನೌಕರರು ಮುಷ್ಕರ ಆರಂಭಿಸಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ತುರ್ತು ಸಭೆ ಕರೆದು ಚರ್ಚಿಸಿರುವ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರ ಮನವೊಲಿಕೆಗೆ ಯತ್ನಿಸಿದ್ದಾರೆ. ರಾಜ್ಯಾದ್ಯಾಂತ ಬಸ್ ಸಂಚಾರ ಸ್ತಬ್ಧವಾಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಇನ್ನಷ್ಟು ತೊಂದರೆ ಕೊಡುವುದು ಸರಿಯಲ್ಲ. ಹೀಗಾಗಿ ಮುಷ್ಕರ ಹಿಂಪಡೆಯುವಂತೆ ಮನವಿ ಮಾಡಿದರು.

ಸಾರಿಗೆ ನೌಕರರ ಬೇಡಿಕೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಲಾಕ್ ಡೌನ್ ನಂತಹ ಸಂಕಷ್ಟದಲ್ಲಿ ಸಾರಿಗೆ ಇಲಾಖೆ ಸಂಪೂರ್ಣ ನಷ್ಟವಾಗಿ ಸಂಬಳ ಕೊಡಲೂ ಹಣವಿಲ್ಲದ ಸಂದರ್ಭದಲ್ಲಿ ಕೂದ ಸರ್ಕಾರದಿಂದ ಹಣ ಪಡೆದು ನೌಕರರಿಗೆ ಸಂಬಳ ಪಾವತಿ ಮಾಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಶೇ.25ರಷ್ಟು ವೇತನ ಕಡಿತ ಮಾಡಲಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ನಾಲ್ಕೂ ನಿಗಮಗಳಿಗೂ ವೇತನ ಪಾವಿತಿಸಿದ್ದೇವೆ. ಸಾರಿಗೆ ನೌಕರರ ಸಂಬಳವನ್ನು ಎಂದಿಗೂ ನಿಲ್ಲಿಸಿಲ್ಲ. ಇದನ್ನು ನೌಕರರು ಅರ್ಥಮಾಡಿಕೊಳ್ಳಬೇಕು. ಮುಷ್ಕರ ವಾಪಸ್ ಪಡೆದು ಕೆಲಸಕ್ಕೆ ಹಾಜರಾಗಬೇಕು ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button