*ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಥಿತಿ ಹೇಗಿದೆ? ವೈದ್ಯರು ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಲಕ್ಷ್ಮೀ ಹೆಬ್ಬಾಳಕರ್ ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚನ್ನರಾಜ ಹಟ್ಟಿಹೊಳಿ ಅವರೂ ಗಾಯಗಳಾಗಿವೆ.
ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಹೊರಟ್ಟಿದ್ದ ವೇಳೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಚನ್ನರಾಜ ಹಟ್ಟಿಹೊಳಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಇಬ್ಬರನ್ನೂ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ರವಿ ಪಾಟೀಲ್ ಸಚಿವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆನ್ನಿಗೆ ಪೆಟ್ಟು ಬಿದ್ದಿದೆ. ಬೆನ್ನಿನ ಎಲ್ ಬೋದಲ್ಲಿ ಕಾಂಪ್ರೆಶನ್ ಆಗಿದೆ. ಚಿಕಿತ್ಸೆ ಮುಂದುವರೆದಿದೆ. ಚನ್ನರಾಜ ಹಟ್ಟಿಹೊಳಿ ಅವರಿಗೆ ತಲೆಯಭಾಗದಲ್ಲಿ ಪೆಟ್ಟಾಗಿದ್ದು, ಮೆದುಳು ಊದಿಕೊಂಡಿದೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆತಂಕಪಡುವ ಅಗತ್ಯವಿಲ್ಲ.
ಲಕ್ಷ್ಮೀ ಹೆಬ್ಬಾಳಕರ್ ಅವರ ಬೆನ್ನಿಗೆ ಪೆಟ್ಟು ಬಿದ್ದಿರುವ ಕಾರಣ 1 ತಿಂಗಳು ಬೆಡ್ ರೆಸ್ಟ್ ತೆಗೆದುಕೊಳ್ಳಬೇಕು. ಚನ್ನರಾಜಹಟ್ಟಿಹೊಳಿ ಒಂದು ವಾರ ವಿಶ್ರಾಂತಿ ಪಡೆಯುವ ಅಗತ್ಯವಿದೆ ಎಂದು ತಿಳಿಸಿದರು.
ಇನ್ನು ಕಾರುಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ