*ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಥಿತಿ ಹೇಗಿದೆ? ವೈದ್ಯರು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಲಕ್ಷ್ಮೀ ಹೆಬ್ಬಾಳಕರ್ ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚನ್ನರಾಜ ಹಟ್ಟಿಹೊಳಿ ಅವರೂ ಗಾಯಗಳಾಗಿವೆ. ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಹೊರಟ್ಟಿದ್ದ ವೇಳೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಚನ್ನರಾಜ ಹಟ್ಟಿಹೊಳಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಇಬ್ಬರನ್ನೂ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading *ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಥಿತಿ ಹೇಗಿದೆ? ವೈದ್ಯರು ಹೇಳಿದ್ದೇನು?*