Kannada NewsKarnataka NewsLatestPolitics

*ಪೊಲೀಸ್ ಅಧಿಕಾರಿಗಳ ಮೇಲೂ ವಿಕೃತಿ, 50 ವರ್ಷದ ಮಹಿಳೆಯರ ಮೇಲೂ ದೌರ್ಜನ್ಯವೆಸಗಿದ್ದಾರೆ; ಪ್ರಜ್ವಲ್ ರೇವಣ್ಣ ಕೇಸ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ*

ಬೇಟಿ ಬಚಾವೋ, ಬೇಟಿ ಪಡಾವೋ ಬರೀ ಘೋಷಣೆ ಅಷ್ಟೇನಾ? ಪ್ರಧಾನಿ ಮೋದಿಗೀ ಲಕ್ಷ್ಮೀ ಹೆಬ್ಬಳ್ಕರ್ ಪ್ರಶ್ನೆ

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ. 16 ವರ್ಷದಿಂದ 50 ವರ್ಷದವರೆಗಿನ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ ಎಂದು ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಕೆಲಸದವರಿಂದ ಹಿಡಿದು ಪೊಲೀಸ್ ಅಧಿಕಾರಿಗಳವರೆಗೆ ದೌರ್ಜನ್ಯ ನಡೆಸಲಾಗಿದೆ. ಹೆದರಿಸಿ ಬೆದರಿಸಿ ಈ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದರು.

ಹೆಚ್.ಡಿ.ರೇವಣ್ಣ ಮುಖ್ಯ ಆರೋಪಿ. ಪ್ರಜ್ವಲ್ ರೇವಣ್ಣ ಎರಡನೇ ಆರೋಪಿ. ನನಗೆ ವಿದೇಶದಿಂದ ಕರೆಗಳು ಬರುತ್ತಿವೆ. ಇಷ್ಟೆಲ್ಲ ನಡೆಯುತ್ತಿದ್ದರೂ ಬಿಜೆಪಿ ನಾಯಕರು ಯಾಕೆ ತುಟಿ ಬಿಚ್ಚುತ್ತಿಲ್ಲ? ಹುಬ್ಬಳ್ಳಿ ಘಟನೆ ಬಗ್ಗೆ ಎಲ್ಲಾ ಜಿಲ್ಲೆಗಳಲ್ಲಿ ಧರಣಿ ಮಾಡಿದರು. ಧೀಮಂತ ಬಿಜೆಪಿ ನಾಯಕರಿಗೆ ಈ ಹೆಣ್ಣು ಮಕ್ಕಳು ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಪಿಯವರು ಹೊರಟಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್ ಜೆಡಿಎಸ್ ನವರನ್ನು ಕೇಳಿ ಅಂತಾರೆ. ಈ ವಿಚರದಲ್ಲಿ ನಿಮ್ಮ ನಿಲುವೇನು? ರಾಜ್ಯದಲ್ಲಿ ನಡೆದ 2-3 ಪ್ರಕರಣವನ್ನು ಪ್ರಧಾನಿ ಮೋದಿ ಉಲ್ಲೇಖಿಸುತ್ತಾರೆ. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಯಾಕೆ ಮಾತನಡುತ್ತಿಲ್ಲ? ಪಕ್ಕದಲ್ಲೇ ಅದೇ ಸಂಸದನನ್ನು ಕೂರಿಸಿಕೊಂಡು ಭಾಷಣ ಮಾಡುತ್ತಾರೆ. ಬೇಟಿ ಬಚಾವೋ, ಬೇಟಿ ಪಡಾವೋ ಬರೀ ಘೋಷಣೆ ಅಷ್ಟೇನಾ? ಎಂದು ಕಿಡಿಕಾರಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button