
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಶ್ರೀ ಗುಡದಮ್ಮ ದೇವಸ್ಥಾನದ ನೂತನ ಕಲ್ಯಾಣ ಮಂಟಪದ ಕಟ್ಟಡದ ಕಾಮಗಾರಿಗಳ ಕ್ವಾಲಂ ಪೂಜೆಗೆ ಶನಿವಾರ ಚಾಲನೆಯನ್ನು ನೀಡಲಾಯಿತು.

ಶ್ರೀ ಗುಡದಮ್ಮ ದೇವಸ್ಥಾನದ ಕಲ್ಯಾಣ ಮಂಟಪ ನಿರ್ಮಾಣವು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿತ್ತು, ಗ್ರಾಮಸ್ಥರ ಬೇಡಿಕೆಯಂತೆ ಅವರ ಬೇಡಿಕೆಗಳಿಗೆ ಸ್ಪಂದಿಸಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವ್ಯಯಕ್ತಿಕ ಖರ್ಚಿನಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿ ಕೊಡಲು ಮುಂದಾಗಿದ್ದಾರೆ.
ಕಲ್ಯಾಣ ಮಂಟಪ ನಿರ್ಮಾಣದ ಗುಣಮಟ್ಟದ ಬಗ್ಗೆ ಮತ್ತು ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕುರಿತು ಲಕ್ಷ್ಮಿ ಹೆಬ್ಬಾಳಕರ್ ಸೂಚನೆಯನ್ನು ನೀಡಿದ್ದಾರೆ. ತಮ್ಮ ಬೇಡಿಕೆಗೆ ಸ್ಪಂದಿಸಿರುವ, ವಯಕ್ತಿಕವಾಗಿ ಹಣ ನೀಡುತ್ತಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಮಾಜಿ ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, ಮೃಣಾಲ ಹೆಬ್ಬಾಳಕರ್, ತೌಸಿಫ್ ಫನಿಬಂದ, ಸಮೀರ, ಚಾಟೆ, ಪ್ರಾಥಮಿಕ ಕೃಷಿ ಪತ್ತಿನ ಸೊಸೈಟಿಯ ಅಧ್ಯಕ್ಷರು, ತಮ್ಮಣ್ಣ, ದೇವಸ್ಥಾನ ಕಮೀಟಿಯ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ