
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವಿಗೀಡಾಗಿದ್ದ ರೈತನ ಕುಟುಂಬಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ 5 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು.
ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದ ನಿವಾಸಿ ಮಾರುತಿ ರಾಮಚಂದ್ರ ಪವಾರ್ ಸುಮಾರು ನಾಲ್ಕು ತಿಂಗಳ ಹಿಂದೆ ಹೊಲದಲ್ಲಿ ಕೆಲಸ ಮಾಡುವ ಸಮಯದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೆ ಮೃತಪಟ್ಟಿದ್ದರು.ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರ ಕಷ್ಟಗಳಿಗೆ ಸ್ಪಂದಿಸಿ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯನ್ನು ಸಂಪರ್ಕಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ 5 ಲಕ್ಷ ರೂ. ಮಂಜೂರು ಮಾಡಿಸಿದ್ದರು. ಪರಿಹಾರದ ಚೆಕ್ ನ್ನು ಶನಿವಾರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಯರಾಮ ಪಾಟೀಲ, ಅನಿಲ ಪಾವಸೆ, ದತ್ತಾ ಪಾಟೀಲ, ಹೆಸ್ಕಾಂ ಇಂಜಿನಿಯರ್ ಹಮ್ಮಣ್ಣವರ, ನಾಥಾಜೀ ಪಾಟೀಲ, ಉಮೇಶ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.




